ಚಿತ್ರಮಂದಿರ ಭರ್ತಿಗೆ ಯಾವುದೇ ನಿರ್ಬಂಧವಿಲ್ಲ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್​ಗಳಲ್ಲಿ ಜನರ ಸಂಖ್ಯೆಯನ್ನು ಶೇ.50 ರಷ್ಟು ಸೀಮಿತ ಮಾಡಿ ಸರ್ಕಾರ ಆದೇಶ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂತಹ ಯಾವುದೇ ಪ್ರಸ್ತಾಪವೂ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಈ ಕುರಿತು ಟ್ವೀಟ್‌ ಮೂಲಕ ಸ್ಪಷ್ಟಪಡಿಸಿರುವ ಅವರು, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ’ ಎಂದು ಮನವಿ ಮಾಡಿದ್ದಾರೆ.
ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಲ್​ ಹಾಗೂ ಸಿನಿಮಾ ಥಿಯೇಟರ್​ಗಳಲ್ಲಿ ಜನರ ಸಂಖ್ಯೆಯನ್ನು ಶೇ.50 ರಷ್ಟು ಮಂದಿಗೆ ಸೀಮಿತಗೊಳಿಸಲು ಚಿತ್ರರಂಗದಿಂದ ವಿರೋಧ ವ್ಯಕ್ತವಾಗಿತ್ತು.

 

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement