ಕುಮಟಾ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಬಳಿ ಸಂಭವಿಸಿದೆ.
ಕಾರಿನಲ್ಲಿದ್ದ ಉತ್ತರಕನ್ನಡ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರ ಜೊತೆಗೆ ವಿ.ಎಂ.ಭಂಡಾರಿ ಹಾಗೂ ಪರಮೇಶ್ವರ ನಾಯ್ಕ ಎಂಬವರು ಕಾರಿನಲ್ಲಿದ್ದರು ಎಂದು ವರದಿಯಾಗಿದೆ. ಅಂಕೋಲಾದಿಂದ ಹೊನ್ನಾವರ ಕಡೆ ಹೋಗುತಿದ್ದ ಗಣಪಯ್ಯ ಗೌಡ ಅವರು ಕಾರು ಹಾಗೂ ಟ್ಯಾಂಕರ್ ಡಿಕ್ಕಿಯಾಗಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಒಯ್ಯಲಾಗಿದೆ ಎಂದು ವರದಿಗಳು ತಿಳಿಸಿವೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ