ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಮಾಸ್ತಪ್ಪ, ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ.
ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎನ್ನಲಾಗಿದ್ದು, ಮಾಸ್ತಪ್ಪ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು. ಅವರು ಸುಮಾರು ಕೈಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ. ಸಾಲಕೊಟ್ಟವರು ಮನೆ ಬಳಿ ಗಲಾಟೆ ಮಾಡಿದ ನಂತರ ಮನಸ್ಸಿಗೆ ಹಚ್ಚಿಕೊಂಡು ಕುಟುಂಬದೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾಲಗಾರರ ಕಾಟದಿಂದ ಮನೆ ಮಾರಾಟ ಮಾಡಲೂ ಮುಂದಾಗಿದ್ದರು ಎನ್ನಲಾಗಿದೆ.
ಸೋಮವಾರ ಶ್ರೀರಂಗಪಟ್ಟಣದ ಗಂಜಾಂನಿಂದ ಆಟೋದಲ್ಲಿ ತೆರಳಿದ ಮಾಸ್ತಪ್ಪ ಹಾಗೂ ಕುಟುಂಬದವರು ಚಂದಗಾಲು ಬಳಿ ನಾಲೆ ಬಳಿ ಆಟೋ ನಿಲ್ಲಿಸಿ ಮೊದಲು ದಂಪತಿ ಮತ್ತು ಮಗಳು ವಿಷ ಸೇವಿಸಿದ್ದಾರೆ. ಬಳಿಕ ವಿ.ಸಿ.ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement