ಬೆಂಗಳೂರು| ಪ್ರೇಯಸಿ ಕೊಲೆ ಮಾಡಿ ಶವದೊಟ್ಟಿಗೆ ಒಂದು ದಿನ ಕಳೆದ ಪ್ರಿಯಕರ…! ಮಾರನೇ ದಿನ ಪರಾರಿ

ಬೆಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್​ನಲ್ಲಿ ನಡೆದಿದೆ.
ಕೊಲೆಯಾದ ಯುವತಿಯನ್ನು ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, ಅಸ್ಸಾಂ ಮೂಲದವಳು ಎಂದು ಹೇಳಲಾಗಿದೆ. ಆರವ್ ಅನಾಯ್‌ ಎಂಬ ಯುವಕ ಕೊಲೆ ಆರೋಪಿಯಾಗಿದ್ದು, ಈತ ಕೇರಳಮೂಲದವನು ಎನ್ನಲಾಗಿದೆ. ಈತ ಮಾಯಾಳನ್ನು ಕೊಲೆ ಮಾಡಿದ ನಂತರ ಯುವತಿಯ ಶವದ ಜತೆ ಒಂದು ದಿನ ಇದ್ದು, ಮಾರನೇ ದಿನ ಮಾರನೇ ದಿನ ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಮಾಹಿತಿ ಗೊತ್ತಾದ ನಂತರ ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಾಯಾ ಗೊಗೋಯಿ ಹೆಚ್​ಎಸ್​ಆರ್​ ಲೇಔಟ್​​ನಲ್ಲಿ ವಾಸವಿದ್ದ ನವೆಂಬರ್ 23ರಂದು ತನ್ನ ಪ್ರಿಯಕರ ಆರವ್ ಜತೆ, ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ರೂಮ್ ಬುಕ್​ ಮಾಡಿಕೊಂಡು ತಂಗಿದ್ದರು. ಆದರೆ ಅದೇನಾಯ್ತೋ ಏನೋ ಆತ, ತನ್ನ ಪ್ರೇಯಸಿ ಮಾಯಾಳನ್ನು ಕೊಂದು ಪರಾರಿಯಾಗಿದ್ದಾನೆ. ಈ ಕೊಲೆ ನಡೆದು ಮೂರು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಮನೆಯಿಂದ ದುರ್ವಾಸನೆ ಬಂದ ನಂತರ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮಾಯಾ ಗೊಗೋಯ್ ಹಾಗೂ ಆರವ್ ಇಬ್ಬರು ಅಪಾರ್ಟ್ಮೆಂಟ್ ಗೆ ಆಗಮಿಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವೆಂಬರ್‌ 24 ರಂದು ಆತ ಮಾಯಾ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಕೊಲೆ ಬಳಿಕ ಅದೇ ರೂಮ್ ನಲ್ಲಿಯೇ ಸಿಗರೇಟ್ ಸೇದಿದ್ದಾನೆ. ಮೃತದೇಹ ಜೊತೆಯಲ್ಲೇ ಕಾಲ ಕಳೆದಿದ್ದಾನೆ. ಇಂದು, ಮಂಗಳವಾರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಸರ್ವಿಸ್ ಅಪಾರ್ಟ್ ಮೆಂಟ್​ನಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಇಂದಿರಾನಗರ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement