ಇಂದು ಬೆಂಗಳೂರಿಗೆ ಸ್ಪಂದನಾ ಮೃತದೇಹ ಆಗಮನ : ಬುಧವಾರ ಅಂತ್ಯಕ್ರಿಯೆ

ಬೆಂಗಳೂರು: ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ ತಲುಪಲಿದೆ. ಬುಧವಾರ ಸ್ಪಂದನಾ ಅಂತ್ಯ ಸಂಸ್ಕಾರ ನೆರವೇರಲಿದೆ. ಅಂತ್ಯಕ್ರಿಯೆಯ ಸ್ಥಳದ ಬಗ್ಗೆ ವಿಜಯ ​ರಾಘವೇಂದ್ರ ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು. ನಟ ವಿಜಯ್ ರಾಘವೇಂದ್ರ ಅವರು ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸ್ಪಂದನಾ ಅವರು ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.
ಸ್ಪಂದನಾ ಹಾಗೂ ವಿಜಯ ರಾಘವೇಂದ್ರ ದಂಪತಿಗೆ ಶೌರ್ಯ ಎಂಬ ಮಗ ಇದ್ದಾನೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement