26 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿವಾಹಿತ ಮಹಿಳೆಯ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವೈದ್ಯಕೀಯ ಗರ್ಭಪಾತ ಕಾಯಿದೆ- 1971ರ ಪ್ರಕಾರ (ಎಂಟಿಪಿ ಕಾಯಿದೆ) ವಿಧಿಸಲಾದ 24 ವಾರಗಳ ಮಿತಿ ದಾಟಿ ಬೆಳೆದಿರುವ ಭ್ರೂಣದ ಗರ್ಭಪಾತ ಮಾಡಬೇಕೆಂಬ ವಿವಾಹಿತ ಮಹಿಳೆಯ ಮನವಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ವೈದ್ಯಕೀಯ ವರದಿ ಆಧಾರದ ಮೇಲೆ ಸೋಮವಾರ ತಿರಸ್ಕರಿಸಿದೆ.
ಸೆಪ್ಟೆಂಬರ್ 2022 ರಲ್ಲಿ ಮಹಿಳೆಯು ಹಿಂದಿನ ಹೆರಿಗೆಯ ನಂತರ ಪ್ರಸವಾನಂತರದ ಮನೋರೋಗದಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿ ಮಹಿಳೆ 26-ವಾರಗಳನ್ನು ದಾಟಿದ ತನ್ನ ಮೂರನೇ ಗರ್ಭ ತೆಗೆಸಲು ಕೋರಿದ್ದರು. ಭ್ರೂಣ ಅಸಹಜವಾಗಿದ್ದರೆ ಅಥವಾ ಗರ್ಭಿಣಿಯ ಜೀವ ಉಳಿಸುವ ಸಂದರ್ಭದಲ್ಲಿ ಮಾತ್ರ 24 ವಾರಗಳ ನಂತರವೂ ಗರ್ಭಪಾತಕ್ಕೆ ಅನುಮತಿಸಬಹುದಾಗಿದ್ದು ಈ ಕಾನೂನನ್ನು ಮೀರುವಂತಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ ಮಿಶ್ರಾ ಅವರಿದ್ದ ಪೀಠವು ಸಲ್ಲಿಸಲಾದ ಮನವಿ ಯಾವುದೇ ವಿನಾಯಿತಿಗಳ ವ್ಯಾಪ್ತಿಗೆ ಒಳಪಡುವುದಿಲ್ಲವಾದ್ದರಿಂದ ಮನವಿಯನ್ನು ತಿರಸ್ಕರಿಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 11ರಂದು ವಿಭಾಗೀಯ ಪೀಠ ಭಿನ್ನ ತೀರ್ಪು ನೀಡಿತ್ತು. ನ್ಯಾ. ಹಿಮಾ ಕೊಹ್ಲಿ ಅವರು ಗರ್ಭಪಾತಕ್ಕೆ ಅವಕಾಶ ನೀಡಬಾರದು ಎಂದು ತೀರ್ಪಿತ್ತರೆ ಗರ್ಭಾವಸ್ಥೆ ಅಂತ್ಯಗೊಳಿಸುವುದಕ್ಕೆ ಸಂಬಂಧಿಸಿದಂತೆ ಮಹಿಳೆಯ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎಂದು ನ್ಯಾ. ಬಿ ವಿ ನಾಗರತ್ನ ಅಭಿಪ್ರಾಯಪಟ್ಟಿದ್ದರು. ಇದಾದ ಸುಮಾರು ಒಂದು ವಾರದ ನಂತರ ನ್ಯಾಯಾಲಯ ಸೋಮವಾರ ಮಧ್ಯಾಹ್ನ ತೀರ್ಪು ನೀಡಿದೆ.
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಐಐಎಂಎಸ್) ಮಗುವಿನ ಹೆರಿಗೆ ಮಾಡಬೇಕು ಎಂದು ನ್ಯಾಯಾಲಯ ಸೂಚಿಸಿದ್ದು ಮಗುವಿನ ಪಾಲಕರು ಅದನ್ನು ದತ್ತು ನೀಡಲು ಬಯಸಿದರೆ ಹಾಗೆ ಮಾಡಲು ಅವರು ಸ್ವತಂತ್ರರು ಎಂದು ಕೂಡ ಹೇಳಿದೆ. ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯಾ ಭಾಟಿ, ಹಿರಿಯ ನ್ಯಾಯವಾದಿ ಕಾಲಿನ್ ಗೊನ್ಸಾಲ್ವೆಸ್ ವಾದ ಮಂಡಿಸಿದರು.
ಅಕ್ಟೋಬರ್ 11ರಂದು ಭಿನ್ನ ತೀರ್ಪು ಬಂದ ಹಿನ್ನೆಲೆಯಲ್ಲಿ ಅಂತಿಮ ತೀರ್ಪು ನೀಡಲು ರಚಿಸಲಾದ ತ್ರಿಸದಸ್ಯ ಪೀಠದ ಭಾಗವಾಗಿ ಪ್ರಕರಣ ಆಲಿಸಲು ಸಿಜೆಐ ಬಳಿಕ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚಿಸಿದ್ದರು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement