ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ಚಿಕ್ಕಮಗಳೂರು: ರಾಜ್ಯದಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಮತ್ತೊಂದು ಘಟನೆ ವರದಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿದೆ.
ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬವರಿಗೆ ಸೇರಿದ ಹಸು ಇದಾಗಿದ್ದು, ಕೆಚ್ಚಲು ಕತ್ತರಿಸಿದ್ದರಿಂದ ಹಸು ಸತ್ತಿದೆ ಎಂದು ಹೇಳಲಾಗಿದೆ. ಸೇರಿದ ಸುಮಾರು 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದು, ಆದರೆ ಅದು ಸಾಧ್ಯವಾಗದಿದ್ದಾಗ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಇದರಿಂದಾಗಿ ಹಸು ಮೃತಪಟ್ಟಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಮುಂದಾಗಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಎಸಗಲಾಗಿತ್ತು. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಂದು ಮಾಂಸ ಕದ್ದೊಯ್ಯಲಾಗಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement