ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ; ರಾಜೀವ ಗೌಡ ಕಾಂಗ್ರೆಸ್ಸಿನಿಂದ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.
2026 ಜನವರಿ 23ರಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜೀವ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಮತ್ತು ಬ್ಯಾನರ್ ತೆಗೆದಿದ್ದಕ್ಕಾಗಿ ದೂರವಾಣಿ ಮೂಲಕ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೌರಾಯುಕ್ತೆ ಅಮೃತಾ ಗೌಡ ದೂರು ದಾಖಲಿಸಿದ ನಂತರ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಪರಾರಿಯಾಗಿದ್ದಾರೆ. ಘಟನೆ ನಡೆದು 10 ದಿನಗಳು ಕಳೆದರೂ ಪೊಲೀಸರಿಗೆ ಆತನನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement