ಹಳಬರು ಎರಡೂವರೆ ವರ್ಷದ ನಂತರ ಸಚಿವ ಸ್ಥಾನದಿಂದ ಕೆಳಗಿಳಿದು ಬೇರೆಯವರಿಗೆ ಅವಕಾಶ ಮಾಡಿಕೊಬೇಕು : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿದು ಹೊಸಬರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಬೆಂಗಲೂರಿನಲ್ಲಿ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಯ್ಕೆ ಮಾಡುವುದು ಹೈಕಮಾಂಡ್ ನಿರ್ಧಾರ. ಆದರೆ ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡುವುದು ಒಳ್ಳೆಯದು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.
ಮೊದಲ ಬಾರಿ ಸಚಿವರಾಗಿರುವವರು ಮುಂದುವರಿಯಲ್ಲಿ, ಆದರೆ ಹಳಬರು ಎರಡೂವರೆ ವರ್ಷಕ್ಕೆ ಇಳಿದು ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಹೀಗೆ ಮಾಡಿದರೆ ನಾವು ದೇಶದಲ್ಲಿ ಹೊಸ ಪರಂಪರೆಯನ್ನು ಆರಂಭಿಸಿದಂತಾಗುತ್ತದೆ. ಇದು ನನ್ನ ವೈಯಕ್ತಿಕ ಸಲಹೆ’ ಎಂದು ಅವರು ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು. ಹಾಗೂ ಬ್ಲಾಕ್‌ ಅಧ್ಯಕ್ಷರಿಗೂ ಮಹತ್ವದ ಸ್ಥಾನಮಾನ ನೀಡಬೇಕು ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement