ಬೀದರ್; ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಉಪ ಚುನಾವಣೆಗೆ ಬಿಜೆಪಿ ಶರಣು ಸಲಗರಗೆ ಟಿಕೆಟ್ ನೀಡಿದೆ. ಇದರಿಂದಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅವರನ್ನು ಮನವೊಲಿಕೆ ಮಾಡಲು ಪ್ರಯತ್ನ ನಡೆಸಲಾಯಿತು. ಆದರೆ, ನಾಮಪತ್ರವನ್ನು ಅವರು ವಾಪಸ್ ಪಡೆಯಲಿಲ್ಲ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆಗಯ ಕಾರಣ ನೀಡಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಮಲ್ಲಿಕಾರ್ಜುನ ಖೂಬಾ ಎರಡು ಬಾರಿ ಜೆಡಿಎಸ್‌ನಿಂದ ಶಾಸಕರಾಗಿ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್‌ನ ಬಿ. ನಾರಾಯಣರಾವ್ ವಿರುದ್ಧ ಸೋತಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ