ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದಿಂದ ಕರೆಯಲಾಗಿದ್ದ ಕಿರಿಯ ಸಹಾಯಕ ಕಂ ದ್ವಿತೀಯ ದರ್ಜೆ ಸಹಾಯಕರ 1,080 ಹುದ್ದೆಗಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು ಎಂದು ತಿಳಿಸಿದೆ.
1080 ಎಸ್ಡಿಎ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ, ಈಗ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಕಟಾಫ್ ಅಂಕಗಳಂತೆ ಅರ್ಹತೆ ಪಡೆತ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ಜಾಲತಾಣ https://kpsc.kar.nic.in/ ನಲ್ಲಿ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪರಿಶೀಲಿಸುವಂತೆ ಅದು ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ