ಪ್ರತಿಭಾವಂತ ವಿದ್ಯಾರ್ಥಿ ವೇತನಕ್ಕೆ ಶಿಕ್ಷಕರ ಮಕ್ಕಳಿಂದ ಅರ್ಜಿ ಆಹ್ವಾನ

ಬೆಂಗಳೂರು: 2022-23ನೇ ಸಾಲಿಗೆ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ (Karnataka State Teachers’ Welfare Fund), ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2022-23ನೇ ಸಾಲಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಎಸ್‌ಎಸ್‌ಎಲ್‌ಸಿಯಿಂದ ಸ್ನಾತಕೋತ್ತರ ಪದವಿ ವರೆಗೆ ಅತಿ ಹೆಚ್ಚು ಅಂಕ ಪಡೆದ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ನಿವೃತ್ತ ಶಿಕ್ಷಕರು, ನಿವೃತ್ತ ಉಪನ್ಯಾಸಕರು, ಪ್ರಾಂಶುಪಾಲರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುವ ಸಲುವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

2021-22ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಎಸ್‌ಎಸ್‌ಎಲ್ಸಿಯಿಂದ ಪ್ರಸ್ತುತ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಉತ್ತೀರ್ಣರಾದವರು ಸಲ್ಲಿಸಬಹುದು. ಇದರ ಹೊರತಾಗಿ ಸಿಬಿಎಸ್‌ಇ ಹಾಗೂ, ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಅರ್ಜಿಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಶೇ.60ಕ್ಕಿಂತ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳು, ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಅಂಕ ಪಟ್ಟಿಯೊಂದಿಗೆ www.kstbfonline.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವೆಬ್ ಸೈಟ್ ಮೂಲಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-01-2023 ಆಗಿರುತ್ತದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement