ನೋಯಿಡಾದಲ್ಲಿ ವಿಶ್ವ ಡೇರಿ ಶೃಂಗ ಸಭೆ: ಕೆಎಂಎಫ್‍ನ ನಂದಿನಿ ಮಳಿಗೆ ವೀಕ್ಷಿಸಿದ ಪ್ರಧಾನಿ ಮೋದಿ

ನವದೆಹಲಿ: ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.
ಉತ್ತರಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ಸೋಮವಾರ ಆರಂಭವಾದ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಮಾತನಾಡಿದರು.
ಹೈನುಗಾರಿಕೆಯನ್ನೇ ಅವಲಂಬಿತರಾಗಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ ರೈತ ಮಹಿಳೆಯರ ಆರ್ಥಿಕ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸುವಂತೆ ಮೋದಿ ಅವರು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದರು.

ಕೆಎಂಎಫ್‍ನ ಕಾರ್ಯಚಟುವಟಿಕೆಗಳ ಬಗ್ಗೆ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಧಾನಿಗಳಿಗೆ ವಿಸ್ತ್ರತ ಮಾಹಿತಿ ನೀಡಿದರು. ‘ಕರ್ನಾಟಕದಲ್ಲಿ 15,043 ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು, 16 ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳನ್ನು ಹೊಂದಿದೆ. 26 ಲಕ್ಷ ಹಾಲು ಉತ್ಪಾದಕ ಸದಸ್ಯರಿದ್ದು, 10 ಲಕ್ಷ ಹಾಲು ಸರಬರಾಜುದಾರರು ಇದ್ದಾರೆ. 91.88 ಲಕ್ಷ ಕೆ.ಜಿ ಗರಿಷ್ಠ ಶೇಖರಣೆ ಹೊಂದಿದೆ. ಪ್ರತಿದಿನ ₹30 ಕೋಟಿಯನ್ನು ರೈತರಿಗೆ ಹಣ ಪಾವತಿ ಮಾಡುತ್ತಿದೆ ಎಂದು ತಿಳಿಸಿದರು.
ಕೆಎಂಎಫ್ ಆಡಳಿತ ಮಂಡಳಿ ಸದಸ್ಯರು, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ಸದಸ್ಯರು, ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಒಕ್ಕೂಟಗಳ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಈ ವೇಳೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಕೆಎಂಎಫ್‌ನ ‘ಕ್ಷೀರಭಾಗ್ಯ’ ಯೋಜನೆಯು ಪ್ರಶಸ್ತಿ ಗಳಿಸಿತು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement