ಏಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್‌ ಸೇರಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ  ಏಪ್ರಿಲ್‌ 22ರಿಂದ ಆರಂಭವಾಗಲಿದ್ದು, ಹಿಜಾಬ್ ಸೇರಿ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಈಗಾಗಲೇ ಡಿಸಿ, ಎಸ್ಪಿಗಳ ಜೊತೆ ಸಭೆ ನಡೆಸಲಾಗಿದೆ. ಆದರೆ ಪರೀಕ್ಷೆಗೆ ಹಿಜಬ್ ನಿಷೇಧಿಸಲಾಗಿದೆ. ಸಮವಸ್ತ್ರದಲ್ಲೇ ಪರೀಕ್ಷೆಗೆ ಬರಬೇಕು. ಧಾರ್ಮಿಕ ಭಾವನೆಯ ಸಮವಸ್ತ್ರ ಧರಿಸಲು ಅವಕಾಶ ಇಲ್ಲ. ಶಾಲಾ ಆಡಳಿತ ಮಂಡಳಿ ನೀಡಿರುವ ಸಮವಸ್ತ್ರ ಹಾಕಿಕೊಂಡು ಬರಬೇಕು. ಈವರೆಗೆ ಹಿಜಬ್ ಧರಿಸುತ್ತೇವೆ ಎಂದು ಯಾರೂ ಮನವಿ ಮಾಡಿಲ್ಲ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಉಪನ್ಯಾಸಕರು ಹಿಜಬ್ ಹಾಕಬಾರದು. ಉಪನ್ಯಾಸಕರು ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಇದೊಂದು ಸೂಕ್ಷ್ಮ ವಿಚಾರವಾಗಿದೆ ಎಂದ ಅವರು, ವಿದ್ಯಾರ್ಥಿಗಳು ಆರಾಮವಾಗಿ ಪರೀಕ್ಷೆ ಬರೆಯಬೇಕು. ಪೂರ್ವ ಸಿದ್ಧತೆ, ಮಾಡೆಲ್ ಪ್ರಶ್ನೆ ಪತ್ರಿಕೆ ಇದ್ದ ರೀತಿಯೇ ಇರುತ್ತದೆ. ಎಸ್‍ಎಸ್‍ಎಲ್ಸಿ ಪರೀಕ್ಷೆ ಮಾದರಿಯಲ್ಲಿ ಮಕ್ಕಳ ಸ್ನೇಹಿ ಪರೀಕ್ಷೆ ಇರುತ್ತದೆ ಎಂದರು.

ಏಪ್ರಿಲ್ 22 ರಿಂದ ಮೇ 18ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದಿನ ಅನುಭವಗಳ ಆಧಾರದಲ್ಲಿ ಸೋರಿಕೆ ತಡೆಗೆ ಕ್ರಮ ವಹಿಸಲಾಗಿದೆ. ಅಕ್ರಮ ತಡೆಯಲು 2152 ಜಾಗೃತದಳ, 858 ತಾಲ್ಲೂಕು ಜಾಗೃತ ದಳ ಮತ್ತು 64 ಜಿಲ್ಲಾ ಜಾಗೃತ ದಳ ಕಾರ್ಯ ನಿರ್ವಹಿಸಲಿವೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ 144ನೇ ಸೆಕ್ಷನ್ ವಿಧಿಸಲಾಗುವುದು ಎಂದು ನಾಗೇಶ್ ಹೇಳಿದರು.

ಪ್ರಮುಖ ಸುದ್ದಿ :-   ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement