ಹಿಮಾಚಲ ಪ್ರದೇಶದಲ್ಲಿ ಭೂಕುಸಿತ : 6 ಮಂದಿ ಸಾವು, ಐವರಿಗೆ ಗಂಭೀರ ಗಾಯ

ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಭಾನುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಆರು ಜನ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ಮೃತರಲ್ಲಿ ಮೂವರು ಮಹಿಳೆಯರು ಇದ್ದಾರೆ. ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆಯ ಅಂಚಿನಲ್ಲಿ ಕುಳಿತಿದ್ದ ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಜಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ರಸ್ತೆಬದಿಯ ವ್ಯಾಪಾರಿ, ಕಾರು ಸವಾರ ಮತ್ತು ಸ್ಥಳದಲ್ಲಿದ್ದ ಮೂವರು ಪ್ರವಾಸಿಗರು ಮೃತರಲ್ಲಿ ಸೇರಿದ್ದಾರೆ.
ಕುಲ್ಲುವಿನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶ್ವನಿಕುಮಾರ ಅವರು, ಅಪಘಾತದಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಎಸ್‌ಎಚ್‌ಒ ಮಣಿಕರಣ್ ನೇತೃತ್ವದ ಪೊಲೀಸ್ ತಂಡ ಸ್ಥಳದಲ್ಲಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಸಂಘಟಿಸುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement