ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ : ಈಶ್ವರ ಖಂಡ್ರೆ

ಬೆಳಗಾವಿ: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅವರು, ಮೈಸೂರಿನ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ನಾಡಿನ ಜನರ ಪ್ರೀತಿಗೆ ಪಾತ್ರನಾಗಿದ್ದ. ಅರ್ಜನ ಮತ್ತು ನಾಡಿನ ಜನತೆಯ ನಡುವೆ ಭಾವನಾತ್ಮಕ ಸಂಬಂಧ ಇತ್ತು.
ಹಲವು ಹುಲಿ, ಆನೆ ಕಾರ್ಯಾಚರಣೆಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಅರ್ಜುನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement