ರಾಜ್ಯಾದ್ಯಂತ ಮಳೆ ಜೋರು; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದಲ್ಲದೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರೀ ಮಳೆಯುವ ಸರಿಯುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜುಲೈ 27ರಂದು ಆರೇಂಜ್ ಅಲರ್ಟ್ ನೀಡಿದ್ದರೆ, ಜುಲೈ .28ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಿದೆ. ಬೆಳಗಾವಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 26 ಹಾಗೂ 27ರಂದು , ಬೀದರ್ ಮತ್ತು ಕಲಬುರಗಿಯಲ್ಲಿ ಜುಲೈ 27ರಂದು ಭಾರಿ ಮಳೆ ಸುರಿಯುವ ಸಾಧ್ಯೆ ಇರುವುದರಿಂದ ಆರೇಂಜ್‌ ಅಲರ್ಟ್ ನೀಡಲಾಗಿದೆ. ಹಾಸನ, ಬಳ್ಳಾರಿಯಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಿದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement