ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ

ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆಮಾಡಿದ್ದೇನೆ. ಅವರಿಗೆ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ ನೀಡಲಾಗುತ್ತದೆ ಎಂದು ತಿಳಿಸಿದರು.
ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ, ‘ಹಂಪನಾ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಗೌದು. ಹಂಪ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರಾಗಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ನೀಡಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಟೋಬರ್​ 3 ರಂದು ಚಾಲನೆ ಸಿಗಲಿದೆ. ಈಗಾಗಲೆ ಗಜಪಡೆ ತಾಲೀಮು ಆರಂಭವಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ ; ಕಾರಣ ಏನು ?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement