ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣ ತೀರ್ಪು ; ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಆಗಸ್ಟ್‌ 1ರಂದು ಎತ್ತಿ ಹಿಡಿದಿದ್ದ ತನ್ನ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚಿಗೆ ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ಮರುಪರಿಶೀಲನೆ ಅರ್ಜಿ ಸಲ್ಲಿಸಲು ಅನುಮತಿ ನೀಡಲಾಗಿತ್ತು. ಮುಕ್ತ ನ್ಯಾಯಾಲಯದಲ್ಲಿ ಮರುಪರಿಶೀಲನಾ ಅರ್ಜಿಯನ್ನು ಪಟ್ಟಿ ಮಾಡಲು ಕೋರಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದಾಗ ತೀರ್ಪಿನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ. ಹೀಗಾಗಿ, ಮರುಪರಿಶೀಲನಾ ಅರ್ಜಿ ವಜಾ ಮಾಡಲಾಗಿದೆ” ಎಂದು ಸೆಪ್ಟೆಂಬರ್‌ 24ರ ಆದೇಶದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದೆ.
ತೀರ್ಪು ಮರುಪರಿಶೀಲನೆ ಮಾಡಲು ಅರ್ಜಿದಾರರು ಸಕಾರಣ ನೀಡಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಬಿ. ಆರ್‌. ಗವಾಯಿ, ವಿಕ್ರಮನಾಥ, ಬೆಲಾ ಎಂ ತ್ರಿವೇದಿ, ಪಂಕಜ್‌ ಮಿತ್ತಲ್‌, ಸತೀಶಚಂದ್ರ ಶರ್ಮಾ ಮತ್ತು ಮನೋಜ ಮಿಶ್ರಾ ಅವರನ್ನೊಳಗೊಂಡ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಹೇಳಿದೆ.
ಆಗಸ್ಟ್‌ 1ರಂದು ಸಿಜೆಐ ಚಂದ್ರಚೂಡ ಅವರ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಇ ವಿ ಚಿನ್ನಯ್ಯ ಮತ್ತು ಆಂಧ್ರ ಪ್ರದೇಶ ಸರ್ಕಾರ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ 2005 ರಲ್ಲಿ ನೀಡಲಾಗಿದ್ದ ತೀರ್ಪನ್ನು ಬದಿಗೆ ಸರಿಸಿತ್ತು.

ಪ್ರಮುಖ ಸುದ್ದಿ :-   ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿ ಅದನ್ನೇ ನಿಗ್ರಹಿಸಿದ ಯುವಕ..! ದೃಶ್ಯ ವೀಡಿಯೊದಲ್ಲಿ ಸೆರೆ-ವೀಕ್ಷಿಸಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement